ಜೇವರ್ಗಿ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಪಟ್ಟಿ ಪ್ರಕಟ: ಅಕ್ಷೇಪಣೆಗೆ ಆಹ್ವಾನ
Update: 2025-05-12 21:33 IST
ಸಾಂದರ್ಭಿಕ ಚಿತ್ರ
ಕಲಬುರಗಿ : ಜೇವರ್ಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 20 ಅಂಗನವಾಡಿ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆ ಮಾಡಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಜೇವರ್ಗಿ ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ 2025ರ ಮೇ 21ರ ಸಂಜೆ 5.30 ಗಂಟೆಯೊಳಗಾಗಿ ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.