ಜೇವರ್ಗಿ | ರೆಡ್ ಕ್ರಾಸ್ ಮಾನವೀಯತೆಯ ಸೇವೆ ಮಾಡುವ ಸಂಸ್ಥೆ: ಡಾ.ಸೂರ್ಯಕಾಂತ್ ಉಮಾಪುರೆ
ಕಲಬುರಗಿ : ರೆಡ್ ಕ್ರಾಸ್ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಅನಾಹುತಗಳಿಂದ ಜನರನ್ನು ರಕ್ಷಿಸುವ ಮತ್ತು ಅವರಿಗೆ ಯಾವುದೇ ತಾರತಮ್ಯವಿಲ್ಲದೆ ಮಾನವೀಯತೆಯ ಸೇವೆ ಮಾಡುವ ಸಂಸ್ಥೆ ಆಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಮಿತಿಯ ಸದಸ್ಯರಾದ ಡಾ.ಸೂರ್ಯಕಾಂತ್ ಉಮಾಪುರೆ ಹೇಳಿದರು.
ಅವರು ಜೇವರ್ಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಕ್ರಾಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ಪ್ರಥಮ ಚಿಕಿತ್ಸೆ ಅರಿವು' ಕಾರ್ಯಕ್ರಮ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ನಾ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಅಫಜಲಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರು, ಸಹ ಪ್ರಾಧ್ಯಾಪಕರಾದ ಡಾ.ಸಂತೋಷ ಹುಗ್ಗಿ ಮಾತನಾಡಿದರು.
ಪ್ರಾಂಶುಪಾಲರಾದ ಲಕ್ಷ್ಮಣ ಬೋಸ್ಲೆ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ.ಖುತೇಜಾ ನಸ್ರಿನ್ ಸ್ವಾಗತಿಸಿದರು. ರೋವರ್ಸ್ ಸ್ಕೌಟ್ಸ್ ಲೀಡರ್ ಡಾ.ರಾಮುಲು ಮತ್ತು ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಡಾ.ಶಿಲ್ಪಾ ಅತಿಥಿಗಳನ್ನು ಪರಿಚಯಿಸಿದರು.
ರೇಂಜರ್ಸ್ ಲೀಡರ್ ಭಾಗ್ಯ ಶ್ರೀ ಠಾಕೂರ್ ವೇದಿಕೆ ಮೇಲಿದ್ದರು. ವಿದ್ಯಾರ್ಥಿನಿ ತೇಜಸ್ವಿನಿ ಪ್ರಾರ್ಥಿಸಿದರು. ಕನ್ನಡ ವಿಭಾಗದ ಅಧ್ಯಾಪಕ ಡಾ.ಮಲ್ಲಿಕಾರ್ಜುನ ಹೂಗಾರ ನಿರೂಪಿಸಿದರು. ಹಿಂದಿ ವಿಭಾಗದ ಅಧ್ಯಾಪಕ ಭಜರಂಗ ಮಾಳಿ ವಂದಿಸಿದರು.