ಚಿತ್ತಾಪುರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ; ಸಾಧಕರಿಗೆ ಸನ್ಮಾನ
ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ನಾಗಯ್ಯ ಹಿರೇಮಠ
ಚಿತ್ತಾಪುರ: ಪಟ್ಟಣದ ಪ್ರಜಾಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ಬಳಿಕ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ವಿಠ್ಠಲ್ ಬಿರಾದಾರ ಅವರ ನೇತೃತ್ವದಲ್ಲಿ ಸಿಬ್ಬಂದಿ ಕವಾಯತು ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಹಶೀಲ್ದಾರ್ ನಾಗಯ್ಯ ಹಿರೇಮಠ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಾತನಾಡಿದರು.ಈ ಸಂದರ್ಭದಲ್ಲಿ ತಾಪಂ ಇಓ ಮಹ್ಮದ್ ಅಕ್ರಂ ಪಾಶಾ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಸಿಪಿಐ ಎಸ್.ಸಿ ಪಾಟೀಲ್, ಭೀಮಣ್ಣ ಸಾಲಿ, ಭಾರತಿ ದಂಡೋತಿ, ಮಂಜುನಾಥ ರೆಡ್ಡಿ, ಬಸವರಾಜ ಬಳೂಂಡಗಿ, ರಾಜಕುಮಾರ ಮರತೂರಕರ್, ದೇವಿಂದ್ರ ಅಣಕಲ್, ವಿಜಯಕುಮಾರ ಬಡಿಗೇರ್, ಸಂಜೀವಕುಮಾರ್ ಮಾನಕರ್, ಸೈಯದ್ ನಸೀರ್ ಹಾಶ್ಮಿ, ನಾಗರೆಡ್ಡಿ ಗೋಪಸೇನ್, ದೇವೇಂದ್ರ ಅಣಕಲ್, ಮಲ್ಲಿಕಾರ್ಜುನ ಬಮ್ಮನಳ್ಳಿ, ಆರತಿ ತುಪ್ಪದ್ ಸೆರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಅನೇಕ ಮುಖಂಡರು, ಶಿಕ್ಷಕರು ಹಾಗೂ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಇದ್ದರು.