×
Ad

ಕಲಬುರಗಿ ಜಿಲ್ಲೆಯ ರೈತರ ಬೆಳೆವಿಮೆ ನೋಂದಣಿಗೆ ಜು.31 ಕೊನೆಯ ದಿನ: ಸಮದ್ ಪಟೇಲ್

Update: 2025-06-11 19:34 IST

ಕಲಬುರಗಿ: 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆದಿರುವ ಕೆಳಕಂಡ ಬೆಳೆಗಳಿಗೆ ರೈತರು ತಮ್ಮ ಹತ್ತಿರದ ಗ್ರಾಮ್-ಒನ್, ಸಿ.ಎಸ್.ಸಿ ಕೇಂದ್ರ, ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‍ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ನಿರ್ದೇಶಕರಾದ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಬೆಳೆವಾರು ರೈತರು ಪಾವತಿಸಬೇಕಾದ ವಂತಿಕೆ ವಿವರ ಇಂತಿದೆ. ಹೆಸರು (ಮಳೆಆಶ್ರಿತ) ಪ್ರತಿ ಎಕರೆಗೆ 269.13 ರೂ. ವಂತಿಕೆ, ಉದ್ದು (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 265.08 ವಂತಿಕೆ, ತೊಗರಿ (ಮಳೆಆಶ್ರಿತ) ಪ್ರತಿ ಎಕರೆಗೆ 388.51 ರೂ. ವಂತಿಕೆ, ತೊಗರಿ (ನೀರಾವರಿ) ಪ್ರತಿ ಎಕರೆಗೆ ರೂ. 406.72 ವಂತಿಕೆ, ಹತ್ತಿ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 865.75 ವಂತಿಕೆ, ಹತ್ತಿ (ನೀರಾವರಿ) ಪ್ರತಿ ಎಕರೆಗೆ ರೂ. 1492.33 ವಂತಿಕೆ ಹಾಗೂ ಸೂಯಾಅವರೆ (ಮಳೆಆಶ್ರಿತ) ಪ್ರತಿ ಎಕರೆಗೆ ರೂ. 331.85 ವಂತಿಕೆಯನ್ನು ರೈತರು ಪಾವತಿಸಬೇಕು. ರೈತರು ನೋಂದಣಿ ಮಾಡಿಕೊಳ್ಳಲು 2025ರ ಜುಲೈ 31 ಕೊನೆಯ ದಿನವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಅತಿವೃಷ್ಟಿ, ಅನಾವೃಷ್ಟಿ, ಅಕಾಲೀಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆನಾಶವಾಗಬಹುದು. ಆದ್ದರಿಂದ ರೈತಭಾಂದವರು ಬಿತ್ತನೆ ಕಾರ್ಯ ಕೈಗೊಳ್ಳುವುದಷ್ಟೇ ಅಲ್ಲದೆ, ಬಿತ್ತಿದ ಬೆಳೆಯ ಕ್ಷೇತ್ರವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ನೊಂದಾಯಿಸುವುದು ಸಹ ಪ್ರಮುಖವಾಗಿದೆ.

ಕಳೆದ 3 ಮೂರು ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ 5,61,082 ಲಕ್ಷ ರೈತರು ಬೆಳೆವಿಮೆ ನೋಂದಣಿ ಮಾಡಿದ್ದು, 59.39 ಕೋಟಿ ರೂ. ರೈತರು ವಂತಿಕೆ ಪಾವತಿ ಮಾಡಿರುತ್ತಾರೆ ಹಾಗೂ 954.61 ಕೋಟಿ ರೂ. ಪರಿಹಾರ ಧನವನ್ನು ರೈತರ ಖಾತೆಗೆ ಪಾವತಿಸಲಾಗಿದೆ. ಕಳೆದ ಮೂರು ವರ್ಷದ ಮಾಹಿತಿ ನೊಡಿದಾಗ ರೈತರಿಗೆ ಬೆಳೆವಿಮೆ ಯೋಜನೆ ಬಹಳ ಅನುಕೂಲಕರವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ.90 ರಷ್ಟು ಪ್ರದೇಶ ಮಳೆಯಾಶ್ರಿತವಾಗಿರುವುದರಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಸತತವಾಗಿ ಬೆಳೆಗಳು ತುತ್ತಾಗಿರುತ್ತವೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News