ಕಲಬುರಗಿ: ನೂತನ ವಿದ್ಯಾಲಯ ಸಂಸ್ಥೆಯ ಕ್ರೀಡಾ ಸಮಿತಿಯ ವತಿಯಿಂದ 2026-27ನೇ ಸಾಲಿನ 15ನೇ ಕ್ರೀಡಾಕೂಟವನ್ನು ನಗರದ ಎನ್.ವಿ. ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಎನ್.ವಿ. ಸಂಸ್ಥೆಯ ಅಧ್ಯಕ್ಷ ಡಾ. ಗೌತಮ್ ಆರ್. ಜಹಾಗೀರದಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ರಾಜಕುಮಾರ ಜಿ. ಕರ್ವೆ, ಡಿಡಿಪಿಐ ಚನ್ನಬಸಪ್ಪ ಮುಧೋಳ ಹಾಗೂ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ್ ಪಾಲ್ಗೊಂಡಿದ್ದರು.

ಎನ್.ವಿ. ಸಂಸ್ಥೆಯ ಉಪಾಧ್ಯಕ್ಷ ಡಾ. ಸುರೇಂದ್ರ ಎಸ್. ಸಿದ್ದಾಪುರಕರ್, ಖಜಾಂಚಿ ಎಂ.ಎ. ಬಾರೀ, ಕಾರ್ಯದರ್ಶಿ ಅಭಿಜಿತ್ ಎ. ದೇಶಮುಖ, ಕ್ರೀಡಾ ಸಮಿತಿ ಅಧ್ಯಕ್ಷ ಸುಹಾಸ ಖಗೆ, ಸಮಿತಿಯ ಸದಸ್ಯರಾದ ಡಾ. ಸದಾಶಿವ ಜಿಡಗೀಕರ್, ವಿಕ್ರಮ್ ಚಂದ್ರಿಕಿ, ಉದಯ್ ಪಿ. ಹೊಂಗುಂಟಿಕರ್, ಸಂತೋಷ್ ಕೋಬಾಳ ಸೇರಿದಂತೆ ಸಂಸ್ಥೆಯ ಎಲ್ಲ ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ