×
Ad

ಕಲಬುರಗಿ | ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ಎಚ್ಚರದಿಂದಿರಲು ಸಾರ್ವಜನಿಕರಿಗೆ ಸೂಚನೆ

Update: 2025-09-23 17:11 IST

ಕಲಬುರಗಿ: ಮಹಾರಾಷ್ಟ್ರದಲ್ಲಿ ಸುರಿದ ವ್ಯಾಪಕ ಮಳೆಯಿಂದ ಉಜ್ಜನಿ ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರ ಹಿನ್ನೆಲೆಯಲ್ಲಿ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಸೊನ್ನಾ ಬ್ಯಾರೇಜ್ ನಿಂದ ಸಹ ಭೀಮಾ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ, ಅಫಜಲಪುರ ತಾಲೂಕಿನ ದೇವಲಗಾಣಗಾಪುರ, ಘತ್ತರಗಿ ಸೇತುವೆ ಹಾಗೂ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಭೀಮಾ ನದಿಗೆ ಒಳಹರಿವು ನಿರಂತರವಾಗಿ ಹೆಚ್ಚುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಸುತ್ತಮುತ್ತಲಿನ ಊರುಗಳಿಗೆ ಸಹ ನದಿ ನೀರು ನುಗ್ಗುವ ಭೀತಿ ವ್ಯಕ್ತವಾಗಿದೆ. ಸಾರ್ವಜನಿಕರು ನದಿ ತೀರ ಪ್ರದೇಶಗಳಲ್ಲಿ ಮಕ್ಕಳನ್ನು ಮತ್ತು ಜಾನುವಾರುಗಳನ್ನು ಬಿಡದೆ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

ಅದೇ ರೀತಿ, ಭೀಮಾ ನದಿಯ ತೀರದ ಗ್ರಾಮಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಡಂಗೂರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News