×
Ad

ಕಲಬುರಗಿ | ಸ್ನಾನಕ್ಕೆಂದು ಭೀಮಾ ನದಿಗೆ ಇಳಿದಿದ್ದ ಮಹಿಳೆ ನೀರುಪಾಲು

Update: 2024-07-12 14:04 IST

ಕಲಬುರಗಿ : ಸ್ನಾನಕ್ಕೆಂದು ಭೀಮಾ ನದಿಗಿಳಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವಲಗಾಣಗಾಪುರದಲ್ಲಿ ವರದಿಯಾಗಿದೆ.

ಮೃತ ಮಹಿಳೆಯನ್ನು ಮಹಾರಾಷ್ಟ್ರದ ಪುಣೆ ಆಲಂಡಿ ನಿವಾಸಿ ಸಾಹಿಲಿ ವಿಶಾಲ್ (24) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ತಂದೆ-ತಾಯಿ ಮತ್ತು ಇಬ್ಬರು ಮಕ್ಕಳೊಂದಿಗೆ ಜುಲೈ.7ರಂದು ಶ್ರೀ ದತ್ತಾತ್ರೇಯನ ದೇವಸ್ಥಾನದ ದರ್ಶನಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಗುರುವಾರ ಬೆಳಿಗ್ಗೆ ನದಿ ದಡದಲ್ಲಿ ಸ್ನಾನ ಮಾಡುವಾಗ ಆಕಸ್ಮಿಕವಾಗಿ ನದಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮೃತ ಮಹಿಳೆಯ ತಂದೆ ಯಶವಂತ ನೇವಶಿ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ.

ಮಹಿಳೆಯ ಮೃತ ದೇಹಕ್ಕಾಗಿ ಪಿಎಸ್ಐ ರಾಹುಲ್ ಪವಾಡಿ, ಸಿಬ್ಬಂದಿ ಸಂಗಣ್ಣ ನೇತೃತ್ವದಲ್ಲಿ ಮಿನುಗಾರರ ತಂಡದಿಂದ ತೀವ್ರ ಶೋಧ ಕಾರ್ಯ ನಡೆಸಿದರೂ, ಮಹಿಳೆಯ ಮೃತದೇಹ ಪತ್ತೆಯಾಗಿರಲಿಲ್ಲ.ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ ಪೊಲೀಸರು, ಮಹಿಳೆಯ ಮೃತದೇಹ ಪತ್ತೆ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News