ಕಲಬುರಗಿ | ಮಂಗಳಮುಖಿಯ ತಲೆ ಬೋಳಿಸಿ, ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; ಮೂವರ ಬಂಧನ
Update: 2025-03-19 11:38 IST
ಬಂಧಿತ ಆರೋಪಿಗಳು
ಕಲಬುರಗಿ : ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಇತ್ತೀಚೆಗೆ ಮಂಗಳಮುಖಿಯೊಬ್ಬರನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶೀಲಾ ಅಲಿಯಾಸ್ ವಿಜಯಕುಮಾರ್ (38), ಭವಾನಿ ಅಲಿಯಾಸ್ ಬಸವರಾಜ್ (24) ಮತ್ತು ಅಂಕೀತಾ ಅಲಿಯಾಸ್ ಅಂಕುಶ್ ಬಂಧಿತ ಮಂಗಳಮುಖಿಯರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತ ಮಂಗಳಮುಖಿಯರು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಅಂಕಿತಾ ಎಂಬ ಮಂಗಳಮುಖಿಯನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ ನಡೆಸಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಮಂಗಳಮುಖಿಯರ ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಅಶೋಕ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.