×
Ad

ಕಲಬುರಗಿ | ಎ.22 ರಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಜನರಿಂದ ಅಹವಾಲು ಸ್ವೀಕಾರ

Update: 2025-04-19 16:03 IST

ಕಲಬುರಗಿ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಎ. 22 ರ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಸಂಘ-ಸಂಸ್ಥೆಗಳ ಮತ್ತು ಅಲೆಮಾರಿ ಸಮುದಾಯದ ಸಾಮಾನ್ಯ ಜನರಿಂದ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಲಿದ್ದಾರೆ.

ಮೇಲ್ಕಂಡ ದಿನದಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಅಲೆಮಾರಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಆಪರ ನಿರ್ದೇಶಕರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News