×
Ad

ಕಲಬುರಗಿ | ಕಸಾಪದ 111ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಾಳೆ (ಮೇ 5ರಂದು) ವೈವಿಧ್ಯಮಯ ಕಾರ್ಯಕ್ರಮಗಳು : ವಿಜಯಕುಮಾರ ತೇಗಲತಿಪ್ಪಿ

Update: 2025-05-04 17:15 IST

ಕಲಬುರಗಿ : ಕನ್ನಡದ ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಪುಸ್ತಕ ಪ್ರಕಟಣೆ, ವಿವಿಧ ಸಮ್ಮೇಳನಗಳು, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಜನಮುಖಿ ಕಾರ್ಯ ಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿವೆ. ಕನ್ನಡ –ಕನ್ನಡಿಗ-ಕರ್ನಾಟಕದ ಸಮಗ್ರ ಏಳ್ಗೆಯೇ ಪರಿಷತ್ತಿನ ಮುಖ್ಯ ಧ್ಯೇಯವಾಗಿದೆ ಎಂದು ತಿಳಿಸಿದರು.

ಮೇ 5 ರಂದು ಬೆಳಗ್ಗೆ 10.45 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಇಲ್ಲಿಯವರೆಗೆ ಆಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರುಗಳಿಗೆ ವಿಶೇಷ ಗೌರವ ಸಮ್ಮಾನ, ಪ್ರಸಕ್ತ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ, ಪರಿಷತ್ತಿನ ಹಿರಿಯ ಸದಸ್ಯರಿಗೆ ವಿಶೇಷ ಸತ್ಕಾರ ಸೇರಿದಂತೆ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ರೂಪಿಸುವ ಮೂಲಕ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ತೇಗಲತಿಪ್ಪಿ ತಿಳಿಸಿದ್ದಾರೆ.

ಶಾಸಕ ಬಸವರಾಜ ಮತ್ತಿಮೂಡ ಸಮಾರಂಭ ಉದ್ಘಾಟಿಸಲಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷರೂ ಆದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದು, ಕುಡಾ ಮಾಜಿ ಅಧ್ಯಕ್ಷ ದಯಾಘನ್ ಧಾರವಾಡಕರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುರೇಶ ಅಕ್ಕಣ್ಣಾ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಗುರೂಜಿ ಪದವಿ ಮಹಾವಿದ್ಯಾಲಯದ ಮುಖ್ಯಸ್ಥ ಕಲ್ಯಾಣಕುಮಾರ ಶೀಲವಂತ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News