×
Ad

ಕಲಬುರಗಿ | ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಅಧಿಕಾರಿಗಳು; ಆರೋಪ

Update: 2025-05-04 18:03 IST

ಸಾಂದರ್ಭಿಕ ಚಿತ್ರ | PC: pexels

ಕಲಬುರಗಿ : ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ ಘಟನೆ ಕಲಬುರಗಿಯಲ್ಲಿ ವರದಿಯಾಗಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆ ಬರೆಯಲು ಬಸವಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿ ನಗರದ ಸೆಂಟ್ ಮೇರಿ ಶಾಲೆಗೆ ಆಗಮಿಸಿದ್ದರು. ಈ ವೇಳೆ ವಿಧ್ಯಾರ್ಥಿಯು ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ತಪಾಸಣಾ ಸಿಬ್ಬಂದಿಗಳು ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿದ್ಯಾರ್ಥಿ ತನ್ನ ಜನಿವಾರ ಕಳಚಿ ಪರೀಕ್ಷೆಗೆ ಹಾಜರಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಜನಿವಾರ ತೆಗೆಸಿದ ಘಟನೆಯ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಬ್ರಾಹ್ಮಣ ಸಮಾಜದ ಕೆಲವು ಮುಖಂಡರು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಆನಂದ ಹೋಟೆಲ್ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಸಿಇಟಿ ಪರೀಕ್ಷೆ ವೇಳೆ ಕೂಡ ಜನಿವಾರ ತೆಗೆಸಿದ ಪ್ರಕರಣ ವರದಿಯಾಗಿತ್ತು. ಈ ಬೆನ್ನಲ್ಲೇ ಮುಂದಿನ ಯಾವುದೇ ಪರೀಕ್ಷೆಗಳಲ್ಲಿ ಜನಿವಾರ ತೆಗೆಸಬಾರದು ಎಂದು ಬ್ರಾಹ್ಮಣ ಸಮುದಾಯದ ಸಂಘಟನೆಗಳು ಅಗ್ರಹಿಸಿದ್ದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News