×
Ad

ಕಲಬುರಗಿ | ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನ

Update: 2025-06-23 21:45 IST

ಕಲಬುರಗಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಈ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ”ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು).

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಅರ್ಜಿದಾರರು ನಿಗಮದ http://kacdc.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಜು.31 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ:94484 51111 (ಬೆಳಿಗ್ಗೆ 10 ರಿಂದ ಸಂಜೆ 5.30 ವರೆಗೆ) ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ, 2ನೇ ಮಹಡಿ, ಸಿಟಿ ಸ್ಕ್ವೆರ್ ಬೀಲ್ಡಿಂಗ್, ಬಡೇಪೂರ 3ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಕಲಬುರಗಿ-585105 ಕಚೇರಿ ವಿಳಾಸಕ್ಕೆ, ಕಚೇರಿ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News