Kalaburagi | ಪಿಡಿಒಗೆ ಜೀವ ಬೆದರಿಕೆ ಆರೋಪ; ಪ್ರಕರಣ ದಾಖಲು
Update: 2026-03-09 16:00 IST
ಕಲಬುರಗಿ : ಮಹಿಳಾ ಪಿಡಿಒವೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇದಲಗಿ ಗ್ರಾಮ ಪಂಚಾಯತ್ ಪಿಡಿಒ ಇಮ್ತಾಝ್ ಯಾಳಗಿ ಅವರು ನೀಡಿರುವ ದೂರಿನ ಮೇರೆಗೆ ಜೇವರ್ಗಿ ತಾಲೂಕಿನ ಬಿಲ್ಲಾಡ ಗ್ರಾಮದ ನಿಂಗಪ್ಪ ಭಗವಂತರಾಯ್ ನಾಯಕೋಡಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಆರೋಪಿ ನಿಂಗಪ್ಪ ಎಂಬಾತನು ಪಿಡಿಒ ಇಮ್ತಾಝ್ ಅವರಿಗೆ ಕರೆ ಮಾಡಿ, ʼಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆʼ ಎಂದು ದೂರಿನಲ್ಲಿ ದಾಖಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.