×
Ad

Kalaburagi | ನಂದೂರು ಕೆ. ಗ್ರಾಮದಲ್ಲಿ 6,126.45 ಲಕ್ಷ ರೂ. ವೆಚ್ಚದ ಹೊಸ ಕೈಗಾರಿಕಾ ವಸಾಹತು ಸ್ಥಾಪನೆ: ಸಚಿವ ಪ್ರಿಯಾಂಕ್‌ ಖರ್ಗೆ

Update: 2026-05-08 20:31 IST

ಕಲಬುರಗಿ: ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ 6,126.45 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (ಕೆಎಸ್‌ಎಸ್‌ಐಡಿಸಿ) ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಂಯುಕ್ತವಾಗಿ ಶೇ.50ರ ಅನುಪಾತದಲ್ಲಿ ಯೋಜನೆ ವೆಚ್ಚವನ್ನು ಭರಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ಈ ಭಾಗ ಹಿಂದುಳಿದ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆಯಿಂದ ಸ್ಥಳೀಯ ಮಟ್ಟದಲ್ಲಿ ಕೈಗಾರಿಕೀಕರಣಕ್ಕೆ ಉತ್ತೇಜನ ದೊರೆಯಲಿದೆ. ಜೊತೆಗೆ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಆರ್ಥಿಕ ಹಾಗೂ ಕೈಗಾರಿಕಾ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಶಯ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News