ಕಲಬುರಗಿ: ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಶರಣಪ್ಪ ಪೀರಪ್ಪ ಸುಂಟಾಣ (60) ಆತ್ಮಹತ್ಯೆ ಮಾಡಿಕೊಂಡ ರೈತ. ಅವರಿಗೆ ಐವರು ಹೆಣ್ಣುಮಕ್ಕಳು ಹಾಗೂ ಓರ್ವ ಗಂಡು ಮಗನಿದ್ದಾನೆ. ಖಾಸಗಿ ವ್ಯಕ್ತಿಗಳಿಂದ ಸುಮಾರು 6 ಲಕ್ಷ ಹಾಗೂ ಎಸ್‌ಬಿಐ ಬ್ಯಾಂಕಿನಿಂದ 2 ಲಕ್ಷ ಸೇರಿದಂತೆ ಒಟ್ಟು ಸುಮಾರು 8 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಬಾಧೆಯಿಂದ ಮನನೊಂದು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ, ಆಳಂದ ಮತ್ತು ಜೇವರ್ಗಿ ಸೇರಿ ಒಂದು ವಾರದಲ್ಲಿ ಮೂವರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ವರದಿಯಾಗಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor