ಕಲಬುರಗಿ | ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬು ಬೆಂಕಿಗಾಹುತಿ
Update: 2024-11-29 16:46 IST
ಕಲಬುರಗಿ : ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.
ಗೊಲ್ಲಾಳಪ್ಪ ನಾಗಾವಿ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ನಾಶವಾಗಿದ್ದು, ಜೆಸ್ಕಾಂ ನಿರ್ಲಕ್ಷ್ಯಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.