ಕಲಬುರಗಿ | ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Update: 2025-07-10 18:22 IST
ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ.
ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ವಸತಿ ಶಾಲೆಗೆ ಸೇರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕ ನಾರಾಯಣ ರಾಠೋಡ್ ಈ ಹಿಂದೆ ಹೇಳಿದ್ದನು. ಈ ವೇಳೆ ಪೋಷಕರು ನಾರಾಯಣ ರಾಥೋಡ್ ನನ್ನು ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲಿಸಿದ್ದರು. ವಿದ್ಯಾರ್ಥಿ ತಾಯಿಯನ್ನು ಬಿಟ್ಟಿರಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.