Kalaburagi | ಜಿಲ್ಲೆಯಾದ್ಯಂತ ಶೇ.86.09ರಷ್ಟು ಗಣತಿ ನಮೂನೆ ವಿತರಣೆ : ಡಿಸಿ ಇಕ್ರಮ್ ಶರೀಫ್
Update: 2026-07-09 21:37 IST
ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಜಿಲ್ಲೆಯಾದ್ಯಂತ ಗುರುವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 20,41,574 (ಶೇ.86.09)ರಷ್ಟು ಗಣತಿ ನಮೂನೆ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಇದುವರೆಗೆ ಬಿಎಲ್ಓಗಳು 1,46,846 (ಶೇ.06.91) ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆ ಪಡೆದು ಮೊಬೈಲ್ ತಂತ್ರಾಂಶದಲ್ಲಿ ಡಿಜಿಟೈಸ್ ಮಾಡಿದ್ದಾರೆ. ಇನ್ನು 5,080 (ಶೇ.0.21) ಮತದಾರರು ಸ್ವಯಂ ಪ್ರೇರಿತವಾಗಿ ಆನ್ ಲೈನ್ ಮೂಲಕ ಗಣತಿ ನಮೂನೆ ಸಲ್ಲಿಸಿದ್ದಾರೆ. ಬಿಎಲ್ಓಗಳು ಮನೆ-ಮನೆ ಭೇಟಿ ಕೊಟ್ಟಾಗ ಇಲ್ಲಿಯವರೆಗೆ 1,282 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಮತ್ತು 1,751 ಜನ ಮತದಾರರು ನಿಧನ ಹೊಂದಿರುವ ಬಗ್ಗೆ ವರದಿಯಾಗಿದೆ.