×
Ad

ಕಲಬುರಗಿ| ಶರಣ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ನಿಧನ

Update: 2025-08-14 22:27 IST

ಡಾ.ಶರಣಬಸವಪ್ಪ ಅಪ್ಪ

ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ಸಂಜೆ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ.

ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನವು ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿದೆ. ಡಾ.ಶರಣಬಸವಪ್ಪ ಅಪ್ಪ ಅವರು ದಾಸೋಹದ ಜತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯೂ ಮಾಡಿದ ಖ್ಯಾತಿಯನ್ನು ಪಡೆದಿದ್ದಾರೆ. ವಿದ್ಯಾಭಂಡಾರಿ ಸೇರಿದಂತೆ ಹಲವು ಬಿರುದುಗಳನ್ನು ಅವರು ಪಡೆದುಕೊಂಡಿದ್ದರು.

ಡಾ.ಶರಣಬಸವಪ್ಪ ಅಪ್ಪ ಅವರ ಅಂತಿಮ ವಿಧಿ ವಿಧಾನವು ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News