×
Ad

ಕಲಬುರಗಿ: ಪೆಟ್ರೋಲ್ ಸುರಿದು ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2023-12-23 22:54 IST

ಕಲಬುರಗಿ: ಚಿತ್ತಾಪುರ ಪಟ್ಟಣದ ಹೊರವಲಯದ ಅರಣ್ಯ ಇಲಾಖೆ ಕಚೇರಿ ಬಳಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಸ್ಥಿತಿಯಲ್ಲಿ ಯುವಕನ ಮೃತದೇಹ ಶನಿವಾರ ಸಂಜೆ ಪತ್ತೆಯಾಗಿದೆ

ಮೃತ ವ್ಯಕ್ತಿ ಚಿತ್ತಾಪುರ ಪಟ್ಟಣದ ಹೂವು ಮಾರಾಟಗಾರ ಮುಹಮ್ಮದ್ ದಾವಲಸಾಬ(25) ಎಂದು ಗುರುತಿಸಲಾಗಿದೆ. ಮೃತದೇಹದ ಗುರುತು ಸಿಗದಂತೆ ಮುಖಕ್ಕೆ ಪ್ರೆಟ್ರೋಲ್ ಹಾಕಿ ಸುಟ್ಟಿದ್ದರಿಂದ ವ್ಯಕ್ತಿಯ ಬಟ್ಟೆ, ಚಪ್ಪಲಿಯಿಂದ ಮೃತ ವ್ಯಕ್ತಿಯ ತಾಯಿ ಮೃತದೇಹವನ್ನು ಗುರುತಿಸಿ ತಮ್ಮ ಮಗ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಶೈಲ್ ಅಂಬಾಟಿ ಹಾಗೂ ಸಿಪಿಐ ಚಂದ್ರಶೇಖರ ತಿಗಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಶ್ವಾನ ಹಾಗೂ ಸಿಬ್ಬಂದಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೊಲೆ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದು, ಈ ಬಗ್ಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News