ಕಲಬುರಗಿ | ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವಕನ ಹತ್ಯೆ
Update: 2025-03-03 21:46 IST
ಕಲಬುರಗಿ : ಯುವಕನೋರ್ವನನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಶಾಂತಿ ನಗರದಲ್ಲಿ ನಡೆದಿದೆ.
ಶಾಂತಿ ನಗರ ಬಡಾವಣೆಯ ನಿವಾಸಿ ಅಹ್ಮದ್ ಫಜಲ್ ಅಲಿಯಾಸ್ ಬಬ್ಲೂ (29) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಅದೇ ಬಡಾವಣೆಯ ನಿವಾಸಿ ಚಂದ್ರಶೇಖರ ಕೊಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಅರಿತ ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್.ಡಿ, ಡಿಸಿಪಿ, ಸಿಪಿಐ, ಪಿಐ ಸೇರಿದಂತೆ ಸಿಬ್ಬಂದಿಗಳು ಆಸ್ಪತ್ರೆಗೆ ತೆರಳಿ ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.