ಕಲಬುರಗಿ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ರಹಮಾನ್ ಪಟೇಲ್ ನಾಮಪತ್ರ ಸಲ್ಲಿಕೆ

Update: 2026-08-10 23:45 IST

ಜೇವರ್ಗಿ: ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳ ಕಾಂಗ್ರೆಸ್ ಮುಖಂಡ ಜನಾಬ್ ಅಬ್ದುಲ್ ರಹಮಾನ್ ಪಟೇಲ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಜೇವರ್ಗಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಶಾಸಕ ಡಾ. ವಿಶ್ವಜೀತ್ ಕದಮ್ ಅವರ ಸಮ್ಮುಖದಲ್ಲಿ ಅಬ್ದುಲ್ ರಹಮಾನ್ ಪಟೇಲ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ದಾಖಲಿಸಿದರು.

ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ತಳಮಟ್ಟದ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸುವ ಉದ್ದೇಶದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಪಕ್ಷದ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಬಲಪಡಿಸುವುದು, ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷದ ಸಿದ್ಧಾಂತ ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಅಬ್ದುಲ್ ರಹಮಾನ್ ಪಟೇಲ್ ಅವರ ಉಮೇದುವಾರಿಕೆಗೆ ಬೆಂಬಲ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜೇವರ್ಗಿ–ಯಡ್ರಾಮಿ ಭಾಗದಿಂದ ಅಬ್ದುಲ್ ರಹಮಾನ್ ಪಟೇಲ್ ಅವರು ನಾಮಪತ್ರ ಸಲ್ಲಿಸಿರುವುದು ಜಿಲ್ಲೆಯ ಕಾಂಗ್ರೆಸ್ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News