×
Ad

ಕಲಬುರಗಿ | ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಆರೋಪ : ಇಬ್ಬರ ವಿರುದ್ಧ ಎಫ್‌ಐಆರ್

Update: 2025-05-05 15:07 IST

ಕಲಬುರಗಿ: ರವಿವಾರ ನಡೆದ ನೀಟ್ ಪರೀಕ್ಷೆಯಲ್ಲಿ ನಗರದ ಸೆಂಟ್ ಮೇರಿ ಪರೀಕ್ಷಾ ಕೇಂದ್ರದಲ್ಲಿ ಓರ್ವ ಪರೀಕ್ಷಾರ್ಥಿಯಿಂದ ಬಲವಂತವಾಗಿ ಜನಿವಾರ ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಮೇರೆಗೆ, ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಾದ ಶರಣಗೌಡ ಮತ್ತು ಗಣೇಶ ಅವರ ಮೇಲೆ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎನ್‌ಎಸ್ ಕಾಯ್ದೆ 298 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಪಾಟೀಲ್ ದೂರಿನಲ್ಲಿ ಆರೋಪಿಸಿದ್ದಾರೆ.

ಶ್ರೀಪಾದ್ ಪಾಟೀಲ್ ಅವರು ನೀಟ್ ಪರೀಕ್ಷೆ ಬರೆಯಲು ಆಗಮಿಸಿದಾಗ, ಅವರ ಜನಿವಾರವನ್ನು ಬಲವಂತವಾಗಿ ತೆಗೆಸಲಾಯಿತು ಎಂದು ಆರೋಪಿಸಲಾಗಿದೆ. ಈ ಘಟನೆ ಖಂಡಿಸಿ, ಬ್ರಾಹ್ಮಣ ಸಮಾಜದಿಂದ ರವಿವಾರ ಪ್ರತಿಭಟನೆ ನಡೆಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News