×
Ad

ಕಲಬುರಗಿ | ಜಾತಿನಿಂದನೆ ಪದ ಬಳಕೆ ಆರೋಪ : ರಟಕಲ್ ಪಿಎಸ್ಐ ಅಮಾನತು

Update: 2025-01-19 22:19 IST

ಕಲಬುರಗಿ : ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ರಟಕಲ್ ಪೊಲೀಸ್ ಠಾಣೆಯ ಪಿಎಸ್ಐ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಕಾಳಗಿ ತಾಲೂಕಿನ ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅಣಬಸಪ್ಪಗೌಡ ಪಾಟೀಲ್ ಹಾಗೂ ದೊಡ್ಡಪ್ಪಗೌಡ ಕುಟುಂಬದ ಮಧ್ಯೆ ಉಂಟಾಗಿರುವ ಜಮೀನು ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಲು ಯತ್ನಿಸುತ್ತಿದ್ದ ವೇಳೆ ಪಿಎಸ್ಐ ಗಂಗಮ್ಮ ಅವರು, ಉಭಯ ಕುಟುಂಬದ ಸದಸ್ಯರನ್ನು ಉದ್ದೇಶಿಸಿ ಪರಿಶಿಷ್ಟ ಸಮುದಾಯವನ್ನು ನಿಂದಿಸುವ ಪದ ಬಳಸಿದ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ತುಣುಕು ಗಮನಿಸಿದ ಭಾರತೀಯ ದಲಿತ ಪ್ಯಾಂಥರ್ ಮತ್ತು ದಲಿತ ಸೇನೆ ಪದಾಧಿಕಾರಿಗಳು ಚಿಂಚೋಳಿ ಡಿವೈಎಸ್ಪಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಸತ್ಯಾಸತ್ಯತೆ ಪರಿಶೀಲಿಸಿದ ಈಶಾನ್ಯ ವಲಯ ಐಜಿಪಿ ಅಜಯ್ ಹಿರೋಳಿ ಪಿಎಸ್ಐ ಗಂಗಮ್ಮ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News