ಕಲಬುರಗಿ | ಗಡಿ ಭಾಗದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ: ಸೋಮಣ್ಣ ಬೇವಿನಮರದ
ಕಲಬುರಗಿ: ರಾಜ್ಯದ ಗಡಿ ಭಾಗದಲ್ಲಿ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಕನ್ನಡ ಭವನದಲ್ಲಿ ರವಿವಾರ ಏರ್ಪಡಿಸಿದ ಮುಖಾ ಮುಖಿ ಕಾರ್ಯಕ್ರಮದಲ್ಲಿ ಗಡಿ ಸಮಸ್ಯೆಗಳು ಹಾಗೂ ಪರಿಹಾರಗಳು ಕುರಿತ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕುರಿತು ರಾಜ್ಯ ಸರಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿಗಳ ಜತೆಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ಕೆಲ ಗಡಿ ಜಿಲ್ಲೆಗಳಿಗೆ ಬೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪ್ರಸ್ತಾಪಿಸಲಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಸಾರಥ್ಯದಲ್ಲಿ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವ ಮೂಲಕ ಪರಿಷತ್ ಅನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗಡಿ ಭಾಗದ ಕನ್ನಡ ಶಾಲೆಗಳನ್ನು ಉಳಿಸಬೇಕು. ಅದಕ್ಕಾಗಿ ಭಾಷಾ ಶಿಕ್ಷಕರ ನೇಮಕಾತಿವಾಗಬೇಕು ಎಂದು ಮನವಿ ಮಾಡಿಕೊಂಡರು.
ವೈದ್ಯ ಡಾ. ಎಸ್.ಬಿ. ಕಾಮರೆಡ್ಡಿ, ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಮಾತನಾಡಿದರು.
ಹಿರಿಯ ಸಾಹಿತಿಗಳಾದ ಡಾ. ಸ್ವಾಮಿರಾವ ಕುಲಕರ್ಣಿ, ಎ.ಕೆ.ರಾಮೇಶ್ವರ, ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಕಲಗುರ್ಕಿ, ಭುವನೇಶ್ವರಿ ಹಳ್ಳಿಖೇಡ, ಪ್ರೊ. ಬಿ.ಎ. ಪಾಟೀಲ ಮಹಾಗಾಂವ, ಪ್ರೊ. ಎಸ್.ಎಲ್. ಪಾಟೀಲ, ಡಾ.ಸದಾನಂದ ಪೆರ್ಲ, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಶರಣರಾಜ ಛಪ್ಪರಬಂದಿ, ತಾಲೂಕು ಕಸಾಪದ ವಿಶಾಲಾಕ್ಷಿ ಮಾಯಣ್ಣವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಕುಪೇಂದ್ರ ಬರಗಾಲಿ, ಸಂಜೀವ ಅತಿವಾಳೆ, ರವಿಕುಮಾರ ಶಹಾಪುರಕರ್, ಸಿ.ಎಸ್. ಮಾಲಿಪಾಟೀಲ ವೇದಿಕೆ ಮೇಲಿದ್ದರು.
ಜಿಲ್ಲೆಯ ಗಡಿ ಕನ್ನಡಿಗರಾದ ಅನೀಲ ಸಕ್ರಿ ಸೇಡಂ, ಸತೀಶ ಸಣ್ಮುಖ ಆಳಂದ, ಭೀಮರಾವ ಪೊಲೀಸ್ ಪಾಟೀಲ ಕಣ್ಣೂರ, ಸಂಗಣ್ಣ ಸೂರಗೊಂಡ, ಶಿವರಾಜ ವಾಲಿ ಚಂದಾಪುರ, ಧರ್ಮರಾಜ ಸಾಹು ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.
ಪ್ರಮುಖರಾದ ಪ್ರಭವ ಪಟ್ಟಣಕರ್, ರೇವಯ್ಯಾ ಸ್ವಾಮಿ, ಈರಣ್ಣ ಸೋನಾರ, ಅನೀಲಕುಮಾರ ಪಾಟೀಲ ತೇಗಲತಿಪ್ಪಿ, ಹಣಮಂತರಾವ ಪೆಂಚನಪಳ್ಳಿ, ಹಣಮಂತ ಪ್ರಭು, ರೇವಣಸಿದ್ದಪ್ಪ ಜೀವಣಗಿ, ಶಿವಾನಂದ ಪೂಜಾರಿ, ಜಯಶ್ರೀ ಜಮಾದಾರ, ಶಿವಕುಮಾರ ಸಿ.ಎಚ್., ಮಲ್ಲಿನಾಥ ಸಂಗಶೆಟ್ಟಿ, ಅಮೃತ ದೊಡ್ಡಮನಿ, ಸೇರಿದಂತೆ ಅನೆಕರು ಉಪಸ್ಥಿತರಿದ್ದರು.