ಕಲಬುರಗಿ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ಗೌರವಧನ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಿಸಿ, ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಶಹಾಬಾದ್ ನಗರದ ನೆಹರೂ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಎರಡು ವರ್ಷಗಳ ಹಿಂದೆ ಸರ್ಕಾರ ನೀಡಿದ್ದ 10 ಸಾವಿರ ರೂ. ಗೌರವಧನದ ಭರವಸೆ ಇನ್ನೂ ಈಡೇರಿಲ್ಲ. ಹೀಗಾಗಿ ಆಶಾ ಕಾರ್ಯಕರ್ತೆಯರು ಅಧಿಕೃತ ಸರ್ಕಾರಿ ಆದೇಶಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸರ್ಕಾರ ಅವರ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಗೋವಿಂದ ಯಳವಾರ ಮಾತನಾಡಿ, ಆಶಾ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಅವರಿಗೆ ಸೂಕ್ತ ಗೌರವಧನ ನೀಡಬೇಕು. ಎಡಿಬಿ ಸಾಲದ ಒಪ್ಪಂದ ಹಾಗೂ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗಳ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣಾಸಕ್ತರು ಚರ್ಚಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ರಕ್ಷಣೆಗೆ ಮುಂದಾಗಬೇಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ ರಾವೂರ, ಸಮಿತಿ ಸದಸ್ಯರಾದ ಬಾಬು ಪವಾರ್, ಪವನ, ಶಿವರಾಜ, ಶ್ರೀಶೈಲ್, ಶಿವಾನಂದ, ಪ್ರಶಾಂತ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ