Kalaburagi | ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

Update: 2026-08-16 23:10 IST

ಕಲಬುರಗಿ: ಆಳಂದ ತಾಲೂಕಿನ ಜವಳಿ(ಡಿ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ವೇಳೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.15ರಂದು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ರಾಷ್ಟ್ರಧ್ವಜವನ್ನು ಸರಿಯಾಗಿ ಹಾರಿಸದೆ ತಲೆಕೆಳಗಾಗಿ ಹಾರಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಡಿಯೊ ಗಮನಿಸಿದ ನಿಂಬರ್ಗಾ ಗ್ರಾಮದ ಶಶಿಧರ ನವರಂಗ ಅವರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಅತಿಥಿ ಶಿಕ್ಷಕ ರಾಜಶೇಖರ ಹರಳಯ್ಯ, ಎಸ್‌ಡಿಎಂಸಿ ಅಧ್ಯಕ್ಷೆ ಯಲ್ಲಮ್ಮ ಹರಳಯ್ಯ ಹಾಗೂ ಪ್ರಭಾರ ಮುಖ್ಯಗುರು ವಿಶ್ವನಾಥ ಮಠ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News