Kalaburagi | ಹೋಳಿ ಹಬ್ಬ ಆಚರಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಆರೋಪ: ಪ್ರಕರಣ ದಾಖಲು
Update: 2026-03-06 23:39 IST
ನಾಗರಾಜ್ ಜಯಪ್ರಕಾಶ್ ಸಾಗರೆ
ಕಲಬುರಗಿ: ಹೋಳಿ ಹಬ್ಬ ಆಚರಣೆ ವೇಳೆ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯನೋರ್ವ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ್ದಾನೆ ಎಂಬ ಆರೋಪದಲ್ಲಿ ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಳಂದ ಕಾಲೋನಿಯ ನಿವಾಸಿ ಆಗಿರುವ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಸದಸ್ಯ ನಾಗರಾಜ್ ಜಯಪ್ರಕಾಶ್ ಸಾಗರೆ ಎಂಬಾತ ಮುಸ್ಲಿಂ ಸಮುದಾಯಕ್ಕೆ ಅವಹೇಳನಕಾರಿಯಾಗಿ ನಿಂದಿಸಿದ್ದಾನೆ. ಈ ಹೇಳಿಕೆಯಿಂದಾಗಿ ಮುಸ್ಲಿಂ ಸಮುದಾಯದವರಿಗೆ ನೋವು ಉಂಟಾಗಿರುತ್ತದೆ. ಹಾಗಾಗಿ ನಾಗರಾಜ್ ಸಾಗರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಬಸವರಾಜ ಮಾಲಿಪಾಟೀಲ್ ಅವರು ದೂರು ನೀಡಿದ್ದರು.
ಬಸವರಾಜ ಮಾಲಿಪಾಟೀಲ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.