ಕಲಬುರಗಿ: ಸರಕಾರಿ ಅನುದಾನಿತ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಾಸ್ಟೆಲ್ ಮಾಲಕ ಹಾಗೂ ಆಡಳಿತಗಾರನ ವಿರುದ್ಧ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಂಚೋಳಿ ಕ್ರಾಸ್‌ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅನುದಾನಿತ ಮಹಾದೇವಿ ತಾಯಿ ಶಕ್ತಿ ಸದನ ಗೃಹ ಹಾಸ್ಟೆಲ್‌ ಮಾಲಕ ಅನಂತರಾಜು  ವಿರುದ್ಧ ಅಫಜಲಪುರ ತಾಲೂಕಿನ ಗ್ರಾಮವೊಂದರ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. 

ಹಾಸ್ಟೆಲ್‌ ನಲ್ಲಿ ಸೆಪ್ಟೆಂಬರ್‌ 17ರಂದು ರಾತ್ರಿ ಅನಂತರಾಜು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೂದಲು ಹಿಡಿದು ಎಳೆದಾಡಿ ಹಾಸ್ಟೆಲ್‌ನಿಂದ ಹೊರಗೆ ಹಾಕಿದ್ದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಇದಲ್ಲದೆ ಹಲವು ಬಾರಿ ಅಶ್ಲೀಲ ಮಾತುಗಳನ್ನು ಆಡಿದ್ದು, ತಾನು ಹೇಳಿದಂತೆ ನಡೆದುಕೊಳ್ಳದಿದ್ದರೆ ಹಾಸ್ಟೆಲ್‌ನಿಂದ ಹೊರಗೆ ಕಳುಹಿಸುವುದಾಗಿ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor