ಕಲಬುರಗಿ | ಪ್ರಶಾಂತಗೌಡ ಮಾಲಿಪಾಟೀಲ್ ನೇತೃತ್ವದಲ್ಲಿ ದಿ ಉಗರ್ ಸಕ್ಕರೆ ಕಾರ್ಖಾನೆ ಸಿಇಓಗೆ ಮನವಿ
ಕಲಬುರಗಿ : ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲಕರು 3,500 ರೂ. ಬೆಲೆ ನೀಡಬೇಕು ಮತ್ತು ಕಬ್ಬು ಕೊಟ್ಟ 15 ದಿನದಲ್ಲಿ ರೈತರ ಖಾತೆಗೆ ಸಂಪೂರ್ಣ ಬಿಲ್ ಪಾವತಿ ಮಾಡಬೇಕು, ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸ ತಡೆಗಟ್ಟಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪ್ರಶಾಂತಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ದಿ ಉಗರ್ ಸಕ್ಕರೆ ಕಾರ್ಖಾನೆ ಸಿಓಗೆ ಮನವಿ ಸಲ್ಲಿಸಲಾಯಿತು.
ಕಬ್ಬು ಕಟಾವು ವಿಳಂಬ ಆಗದಂತೆ ನೋಡಿಕೊಳ್ಳಬೇಕು, ಕಾರ್ಖಾನೆಗೆ ಕಬ್ಬು ಸಾಗಿಸಲು ಬಂದ ವಾಹನ ಚಾಲಕರಿಗೆ ವಿಶ್ರಾಂತಿ ವ್ಯವಸ್ಥೆ, ಶೌಚಾಲಯ ಹಾಗೂ ಊಟದ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಯ ಜಿಲ್ಲಾ ಉಪಾಧ್ಯಕ್ಷ ಶಂಕ್ರಯ್ಯ ಸುಬೆದಾರ್, ಜೇವರ್ಗಿ ತಾಲೂಕ ಅಧ್ಯಕ್ಷ ಪಂಚಯ್ಯ ಹಿರೇಮಠ್, ಯಡ್ರಾಮಿ ತಾಲೂಕಾ ಅಧ್ಯಕ್ಷ ಮಲ್ಲಿಕಾರ್ಜುನ್ ಶಿರವಾಳ, ದೌಲು ವಿರೇಶ ಸೇರಿದಂತೆ ಸ್ಥಳೀಯ ರೈತರು ಭಾಗವಹಿಸಿದ್ದರು.