×
Ad

ಕಲಬುರಗಿ | ಅಲೆಮಾರಿ ಜನಾಂಗಕ್ಕೆ ಮೂಲಸೌಲಭ್ಯ ಒದಗಿಸಲು ಮನವಿ

Update: 2025-04-22 22:32 IST

ಕಲಬುರಗಿ : ಇಲ್ಲಿನ ರಾಮ ನಗರದಲ್ಲಿ ವಾಸಿಸುತ್ತಿರುವ ಅಲೆಮಾರಿ ಸಮುದಾಯದ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ, ಸ್ಲಂ ಜನಾಂದೋಲನ ಸಂಘಟನೆ ವತಿಯಿಂದ ಕರ್ನಾಟಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ, ಅಲೇಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರಿಗೆ ಮನವಿ ಮಾಡಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮನವಿ ಪತ್ರ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ರಾಮ ನಗರದಲ್ಲಿ ಸುಮಾರು 30 ವರ್ಷಗಳಿಂದ ಭೋವಿ ಸಮಾಜದಲ್ಲಿರುವ 50 ಕುಟುಂಬಗಳ ಅಲೆಮಾರಿ ಸಮುದಾಯಕ್ಕೆ ಸೇರಿದ ಜನರು ಕುಟುಂಬ ನಿರ್ವಹಣೆಗಾಗಿ ಕೊಡ ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಬಡವಣೆಯಲ್ಲಿ ಕುಡಿಯುವ ನೀರು, ವಿದ್ಯುತ್, ಶೌಚಾಲಯ ಹಾಗೂ ಇನ್ನೂ ಮುಂದಾಗಿ ಜೀವನ ಸೌಲಭ್ಯ ವಂಚತರನ್ನಾಗಿ ಬದುಕುತ್ತಿದ್ದಾರೆ. ಹಾಗಾಗಿ ಅವರ ಶ್ರೇಯೋಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷೆ ಗೌರಮ್ಮ ಮಾಕಾ, ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಸೇರಿದಂತೆ ಮತ್ತಿತರರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News