×
Ad

Kalaburagi | ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2026-07-01 19:23 IST

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ (ಸಾಮಾನ್ಯ ಪದವಿ ಕೋರ್ಸಿನ ಬಾಲಕ ಮತ್ತು ಬಾಲಕಿಯರ) ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2026ರ ಜುಲೈ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://bcwd.karnataka.gov.in ವೆಬ್‍ಸೈಟ್‍ನ್ನು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮೂಲಕ, ಸಹಾಯವಾಣಿ 8050770004, 8050770005 ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News