Kalaburagi | ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಲಬುರಗಿ: ಕಲಬುರಗಿಯ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯಲ್ಲಿ (“6 ತಿಂಗಳು/180‘’ ದಿನಗಳ ಅವಧಿಯ) “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‘’ ತರಬೇತಿ ಪಡೆಯಲು ಸಹಕಾರ ಸಂಘ-ಸಂಸ್ಥೆ/ ಸಹಕಾರ ಇಲಾಖೆ/ ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಗೂ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಲಬುರಗಿಯಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆ ನಡೆಸುತ್ತಿದೆ. ಈ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ/ ಸಹಕಾರ ಇಲಾಖೆ/ ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಕನಿಷ್ಠ ವಿದ್ಯಾರ್ಹತೆ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯ ಅರ್ಜಿಯನ್ನು ಭರ್ತಿ ಮಾಡಿ 2026ರ ಜೂನ್ 30 ರೊಳಗಾಗಿ ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಈ ತರಬೇತಿಯು ಜುಲೈ-2026 ರಿಂದ ಪ್ರಾರಂಭವಾಗುತ್ತಿದೆ.
ಅದೇ ರೀತಿ ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೂ ಸಹ ಈ ತರಬೇತಿ ನೀಡಲಾಗುತ್ತಿದೆ. ನಿಗದಿತ ಅರ್ಜಿ ನಮೂನೆ, ವಯೋಮಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ-585105 ವಿಳಾಸಕ್ಕೆ ಹಾಗೂ ದೂರವಾಣಿ ಸಂಖ್ಯೆ: 08472-245340/ 9916726886/ 9742307153/ 9113916753 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.