×
Ad

ಕಲಬುರಗಿ | ಅತಿಥಿ ಉಪನ್ಯಾಸಕರು/ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Update: 2025-05-09 18:48 IST

ಕಲಬುರಗಿ : ಪ್ರಸಕ್ತ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಶಾಲೆ (ಉನ್ನತ್ತೀಕರಿಸಿದ) ಹಾಗೂ ಮೌಲಾನಾ ಆಝಾದ್‌ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು https://dom.karnataka.gov.in ವೆಬ್‍ಸೈಟ್‍ ನಿಂದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ತಮ್ಮ ವೈಯಕ್ತಿಕ ವಿವರಣೆಯೊಂದಿಗೆ ಎಲ್ಲಾ ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳನ್ನು ದೃಢೀಕರಿಸಿ ಕಲಬುರಗಿ ನಗರದ ನಗರಾಭಿವೃದ್ಧಿ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ 2025ರ ಮೇ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8277799990 ಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News