×
Ad

Kalaburagi | ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2026-07-08 19:13 IST

ಕಲಬುರಗಿ : 2026-27ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಕೃಷಿ ಪಂಡಿತ ಪ್ರಶಸ್ತಿಗಾಗಿ ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿ ಪಂಡಿತ ಪ್ರಶಸ್ತಿಗಾಗಿ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಯನ್ನು ಕೆ-ಕಿಸಾನ್ ಪೋರ್ಟಲ್‍ ನಡಿ ಆರ್.ಎಸ್.ಕೆ. ಲಾಗಿನ್ (RSK Login) ಅಥವಾ ಸಿಟಿಜನ್ ಲಾಗಿನ್ (Citizen Login) ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ ನಾಗರಿಕ ಸೇವಾ ಕೇಂದ್ರ/ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್‍ಐಡಿ (ಫ್ರೂಟ್ಸ್ ಐಡಿ) FID (FRUITS ID) ಸಂಖ್ಯೆಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಲ್ಪಿಸಲಾಗಿದೆ.

ಆಸಕ್ತಿಯುಳ್ಳ ರೈತರು ಕೃಷಿ ಪಂಡಿತ ಪ್ರಶಸ್ತಿಯ ಅರ್ಜಿಗಳು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ 2026ರ ಆ.31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News