×
Ad

ಕಲಬುರಗಿ | ಶುಲ್ಕ ಮರುಪಾವತಿ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2025-07-09 20:41 IST

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಮೆಟ್ರಿಕ್ ನಂತರದ ಹಾಗೂ ವೃತ್ತಿಪರ ಕೋರ್ಸ್‍ಗಳಲ್ಲಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಹಾಗೂ ಸ್ನಾತಕೋತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್.ಎಸ್.ಪಿ) ದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ್, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿವು ಕಳೆದ ಸೆಮಿಸ್ಟರ್‌/ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಎಸ್.ಎಸ್.ಪಿ. ಪೊರ್ಟಲ್‍ ನಲ್ಲಿ https://ssp.postmatric.karnataka.gov.in ಹಾಗೂ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka.gov.in ವೆಬ್‍ಸೈಟ್‍ ಲ್ಲಿ ಆನ್‍ಲೈನ್ ಮೂಲಕ ನೇರವಾಗಿ 2025ರ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಗಳಾದ ಸೇಡಂ, ಆಳಂದ, ಚಿತ್ತಾಪುರ, ಜೇವರ್ಗಿ, ಅಫಜಲಪುರ, ಚಿಂಚೋಳಿ ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ಮಿನಿ ವಿಧಾನಸೌದ 4ನೇ ಮಹಡಿ) ಕಚೇರಿಯನ್ನು, ಇಲಾಖೆಯ www.gokdom.karnataka.gov.in ವೆಬ್‍ಸೈಟ್‍ ಅನ್ನು ಹಾಗೂ ರಾಜ್ಯಅಲ್ಪಸಂಖ್ಯಾತರ ಸಹಾಯವಾಣಿ 8277799990(24*7) ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News