Kalaburagi | ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Update: 2026-07-27 19:16 IST
ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿಯಿರುವ ಆಂಗ್ಲ ಭಾಷೆಯ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಬಿ.ಎ. ಬಿ.ಇಡಿ. ಮತ್ತು ಟಿ.ಇ.ಟಿ. ಪಾಸಾಗಿರಬೇಕು. ಆಸಕ್ತಿಯುಳ್ಳ ಅಭ್ಯರ್ಥಿಗಳು ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಖುದ್ದಾಗಿ ಬಂದು 2026ರ ಜು.29 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕರಜಗಿ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಹಾಗೂ ಮೊಬೈಲ್ ಸಂಖ್ಯೆ 9880204478 ಗೆ ಸಂರ್ಕಿಸಲು ಕೋರಲಾಗಿದೆ.