Kalaburagi | ಮೆಟ್ರಿಕ್ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಲಬುರಗಿ: ಕಲಬುರಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ 2026-27ನೇ ಸಾಲಿಗೆ ಪ್ರವೇಶ ಪಡೆಯಲು ಎಸ್.ಹೆಚ್.ಪಿ. ಪೋರ್ಟಲ್ ನಲ್ಲಿ (State Hostel Portal (SHP) ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ 5ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ 2026ರ ಜೂ.8 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ https://bcwd.karnataka.gov.in ವೆಬ್‍ಸೈಟ್‍ನ್ನು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮೂಲಕ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.