×
Ad

ಕಲಬುರಗಿ | ಶಿಷ್ಯವೇತನ ಮಂಜೂರಾತಿಗೆ ಅರ್ಜಿ ಆಹ್ವಾನ

Update: 2025-07-14 20:11 IST

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ (ಅಧಿಕಾರಿಗಳನ್ನು ಹೊರತುಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ/ ಪ್ರೊಫೇಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಕಲ್ಯಾಣ ನಿಧಿ ಮತ್ತು ವಿಶೇಷ ನಿಧಿಗಳಿಂದ ಶಿಷ್ಯವೇತನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕಚೇರಿ ವ್ಯಾಪ್ತಿಯಲ್ಲಿ ಬರುವ ಬೀದರ್‌, ರಾಯಚೂರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಮಾಜಿ ಸೈನಿಕರು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ 2025ರ ನವೆಂಬರ್ 30 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News