×
Ad

ಕಲಬುರಗಿ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Update: 2026-03-07 20:23 IST

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯಿಂದ 2025-26ನೇ ಸಾಲಿನ ಎಸ್.ಎಫ್.ಸಿ. (ಮುಕ್ತನಿಧಿ) ಯಡಿ ಕಲಬುರಗಿ ಜಿಲ್ಲಾಧಿಕಾರಿಗಳಿಂದ ಅನುಮೋದನೆಗೊಂಡಿರುವ ಶೇ. 7.25ರ ಕ್ರಿಯಾ ಯೋಜನೆಯಡಿ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ನಿಗದಿಪಡಿಸಿದ ಕಾರ್ಯಕ್ರಮದಡಿ ಉನ್ನತ ವ್ಯಾಸಂಗಕ್ಕಾಗಿ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದ ಪಿ.ಹೆಚ್.ಡಿ. /ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳಿಗೆ (30,000 ರೂ. ಮೀರದಂತೆ) 11 ವಿದ್ಯಾರ್ಥಿಗಳಿಗೆ ಮಾತ್ರ ಸಹಾಯಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಕಲಬುರಗಿ ನಗರದ ನಿವಾಸಿಯಾಗಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಕಡ್ಡಾಯವಾಗಿ ಲಗತ್ತಿಸಬೇಕು. ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಆವಕ ಶಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2026ರ ಮಾರ್ಚ್ 10 ರಿಂದ ಏ.10ರ ಸಂಜೆ 5.30 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 7.25ರ ಶಾಖೆಯನ್ನು ಹಾಗೂ ಪಾಲಿಕೆಯ http://www.kalaburagicity.mrc.gov ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News