ಕಲಬುರಗಿ | ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ : ಕಲಬುರಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ./ ಪ.ಪಂ.ವರ್ಗದ ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ 2025ರ ಜೂನ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ, ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ https://bcwd.karnataka.gov.in ವೆಬ್‍ಸೈಟ್ ಅನ್ನು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು/ವಸತಿ ನಿಲಯ ಮೇಲ್ವಿಚಾರಕರನ್ನು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.