×
Ad

ಕಲಬುರಗಿ | ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

Update: 2025-07-23 20:16 IST

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ. ಹಾಗೂ ಸಮನಾಂತರ ಕೋರ್ಸ್ ಮತ್ತು ಪದವಿ ಮಟ್ಟದ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಮಾತ್ರ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಮೂಲಕ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 43 ಮೆಟ್ರಿಕ್ ನಂತರ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಬಯಸುವ ಪಿಯುಸಿ ಹಾಗೂ ಸಮನಾಂತರ ಕೋರ್ಸ್ ಮತ್ತು ಪದವಿ ಮಟ್ಟದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಹಾಗೂ ಇತರೆ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದಲ್ಲಿ 2025ರ ಆ.2 ರೊಳಗಾಗಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲಿಚ್ಛಿಸುವ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಮಾಹಿತಿ ಕೇಂದ್ರ/ ವಿದ್ಯಾರ್ಥಿನಿಲಯವನ್ನು ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಮಾಹಿತಿ ಪಡೆದು ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News