Kalaburagi | ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ: ಕಲಬುರಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2026-27ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ/ಪ.ಪಂ.ವರ್ಗದ ಪಿ.ಯು.ಸಿ, ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ 2026ರ ಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://bcwd.karnataka.gov.in/ ವೆಬ್‍ಸೈಟ್ ಅನ್ನು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.