×
Ad

ಕಲಬುರಗಿ | ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

Update: 2025-05-06 21:38 IST

ಕಲಬುರಗಿ : ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಹತ್ತಿರವಿರುವ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ನಡೆಸಲಾಗುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.) ಯಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕೆ.ಜಿ.ಟಿ.ಟಿ.ಐ. ಪ್ರಾಂಶುಪಾಲರು ತಿಳಿಸಿದ್ದಾರೆ.

ಈ ಕೋರ್ಸಿನ ತರಬೇತಿ ಅವಧಿಯು 4 ವರ್ಷವಿದ್ದು, (ಇದರಲ್ಲಿ 3 ವರ್ಷದ ಬೋಧನಾ ತರಬೇತಿ ಹಾಗೂ 1 ವರ್ಷದ ಕಡ್ಡಾಯ ವೇತನ ಸಹಿತ ಕೈಗಾರಿಕಾ ತರಬೇತಿ ಒಳಗೊಂಡಿರುತ್ತದೆ) ಹಾಗೂ ಎಐಸಿಟಿಇ ಯಿಂದ ಅನುಮೋದನೆಗೊಂಡಿರುತ್ತದೆ. ಈ ಸಂಸ್ಥೆಯಲ್ಲಿ ಸುಸಜ್ಜಿತ ಮೂಲ ಸೌಕರ್ಯ ಮತ್ತು ಆಧುನಿಕ ಯಂತ್ರೋಪಕರಣಗಳನ್ನು ಹೊಂದಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಹಾಸ್ಟೇಲ್ ಸೌಲಭ್ಯ ಕಲ್ಪಿಸಲಾಗಿದೆ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೆ.ಜಿ.ಟಿ.ಟಿ.ಐ. ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 8884886172, 8660171836, 9902345676 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News