ಕಲಬುರಗಿ| ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ: 2026-27ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
5ನೇ ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಇಲಾಖೆಯ swdhmis.karnata.gov.in ವೆಬ್‍ಸೈಟ್‍ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ 2026ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಿನಿ ವಿಧಾನ ಸೌಧ ಎದುರುಗಡೆ ಐವಾನ್ ಶಾಹಿ ರಸ್ತೆ, ಕಲಬುರಗಿ ವಿಳಾಸಕ್ಕೆ ಅಥವಾ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ವಾರ್ಡನ್‍ರನ್ನು ಸಂಪರ್ಕಿಸಲು ಕೋರಲಾಗಿದೆ.