×
Ad

ಕಲಬುರಗಿ | ಪ್ರಥಮ ಬಿವಿಎ ಪದವಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

Update: 2025-04-25 21:28 IST

ಕಲಬುರಗಿ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊoಡಿರುವ ಮೈಸೂರು ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) [ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ] ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ.ಪದವಿ (UUCMS) ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಮೈಸೂರು ಸಿದ್ಧಾರ್ಥ ನಗರ (ಕಾವಾ) ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ತಿಳಿಸಿದ್ದಾರೆ.

ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ https;//uucms.karnataka.gov.in ಅಥವಾ https://www.cavamysore.karnataka.gov.in ವೆಬ್ ಸೈಟ್‌ನಲ್ಲಿ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News