×
Ad

ಕಲಬುರಗಿ | "ಹೊಯ್ಸಳ", "ಕೆಳದಿ ಚೆನ್ನಮ್ಮ" ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2025-10-17 22:04 IST

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ "ಹೊಯ್ಸಳ" ಮತ್ತು ಬಾಲಕಿಯರಿಗೆ "ಕೆಳದಿ ಚೆನ್ನಮ್ಮ" ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಪ್ರಕರಣವು ಆ.1ರ, 2024 ರಿಂದ ಜು.31ರ, 2025ರ ವರೆಗೆ ನಡೆದಿರಬೇಕು. ದಿನಾಂಕ:01-08-2007ರಂದು ಹಾಗೂ ನಂತರದ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತವೆ.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಈ ಹಿಂದೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಈವರೆಗೆ ಯಾವುದೇ ಅರ್ಜಿಗಳು ಸ್ವೀಕೃತಗೊಂಡಿರುವುದಿಲ್ಲ. ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಮಕ್ಕಳು/ವ್ಯಕ್ತಿಗಳು ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು (ಕನ್ನಡ ಭಾಷೆಯಲ್ಲಿ) 2025ರ ಅಕ್ಟೋಬರ್ 23ರ ಸಂಜೆ 5 ಗಂಟೆಯೊಳಗಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯನ್ನು ಸದರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News