×
Ad

ಕಲಬುರಗಿ | ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Update: 2026-01-17 19:16 IST

ಕಲಬುರಗಿ: 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2024 ರಿಂದ 31-12-2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳು https://sevasindhu.karnataka.gov.in ಆನ್‍ಲೈನ್ ಮೂಲಕ 2026ರ ಜ.31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News