×
Ad

ಕಲಬುರಗಿ | ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

Update: 2025-06-21 22:34 IST

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಎಂ.ಎಸ್.ಕಾಯ್ದೆ 2013 ಸೆಕ್ಷನ್ 24ರಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಜಾಗೃತಿ ಸಮಿತಿಗೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ಶಾಶ್ವತ ಅಹ್ವಾನಿತರೆಂದು ನಾಮನಿರ್ದೇಶನ ಮಾಡಲು ಸಫಾಯಿ ಕರ್ಮಚಾರಿಗಳ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರಗಳವರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿರುವವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಸೆಕ್ಷನ್ 24ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ಸದಸ್ಯರನ್ನು ನೇಮಿಸಬೇಕಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು 2025ರ ಜು.5ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278621, ಮೊಬೈಲ್ ಸಂಖ್ಯೆ 9480843034 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News