Kalaburagi | ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026ರ ಅಕ್ಟೋಬರ್ 1 ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ ಕೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಮತ್ತು ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ 6 ಹಿರಿಯ ನಾಗರಿಕರಿಗೆ ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ 2026ರ ಆಗಸ್ಟ್ 25 ರೊಳಗಾಗಿ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ www.dwdsc.karnataka.gov.in ವೆಬ್‍ಸೈಟ್‍ನ್ನು ಅಥವಾ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ 08472-235222 ಗೆ ಸಂಪರ್ಕಿಸಲು ಕೋರಿದೆ.